ಫೆ.8ಕ್ಕೆ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ
Update: 2022-02-05 21:55 IST
ಉಡುಪಿ, ಫೆ.5: ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಫೆ.8 ಮತ್ತು 9ರಂದು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯನ್ನು ಮಂಗಳವಾರ ಬೆಳಗ್ಗೆ 10ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ.
ಫೆ.9ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಭಾಗವಹಿಸಲಿರುವರು.