ಫೆ. 9,11ರಂದು ವಿಶೇಷ ಲಸಿಕಾ ಅಭಿಯಾನ
Update: 2022-02-05 21:58 IST
ಉಡುಪಿ, ಫೆ.5: ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣದ ಪ್ರಗತಿಯನ್ನು ಹೆಚ್ಚಿಸುವ ಸಲುವಾಗಿ ಫೆ.9 ಮತ್ತು 11ರಂದು ವಿಶೇಷ ಲಸಿಕಾ ಅಭಿಯಾನ ವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮತ್ತು ನಗರ ವ್ಯಾಪ್ತಿಯಲ್ಲಿ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದವರನ್ನು, ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನ ದಾಟಿದವರಲ್ಲಿ, ಪ್ರಥಮ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದು 28 ದಿನ ದಾಟಿದವರಲ್ಲಿ 2ನೇ ಡೋಸ್ ಪಡೆಯದವರಿಗೆ ಹಾಗೂ 60 ವರ್ಷ ಮೇಲ್ಪಟ್ಟವರು, ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತೆಯರು 2ನೇ ಡೋಸ್ ಕೋಡ್ ಲಸಿಕೆ ಪಡೆದು 9 ತಿಂಗಳು ದಾಟಿದವರಿಗೆ ಮುನ್ನೆಚ್ಚರಿಕೆ ಡೋಸ್ ಕೋವಿಡ್‌ಲಸಿಕೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.