×
Ad

ವಸತಿ ನಿರ್ಮಾಣ ಯೋಜನೆಗೆ ಅರ್ಜಿ ಆಹ್ವಾನ

Update: 2022-02-05 22:00 IST

ಉಡುಪಿ, ಫೆ.5: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ (ವಸತಿ) ನಿರ್ಮಾಣ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗಮದ ಜಿಲ್ಲಾ ಕಚೇರಿಯಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 25 ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ - www.karnataka.gov.in/kmvstdcl-ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ರಜತಾದ್ರಿ ಮಣಿಪಾಲ, ದೂರವಾಣಿ ಸಂಖ್ಯೆ:0820-2574884 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News