×
Ad

ಪಾಕಿಸ್ತಾನದ ಮೂವರು ಮಾದಕ ದ್ರವ್ಯ ಕಳ್ಳಸಾಗಣೆದಾರರನ್ನು ಗುಂಡಿಕ್ಕಿ ಕೊಂದ ಬಿಎಸ್ ಎಫ್

Update: 2022-02-06 10:22 IST

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ರವಿವಾರ ಮುಂಜಾನೆ ಪಾಕಿಸ್ತಾನದ ಮೂವರು  ಮಾದಕ ದ್ರವ್ಯ ಕಳ್ಳಸಾಗಣೆದಾರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡ್ರಗ್ ಸ್ಮಗ್ಲರ್ ಗಳಿಂದ  ಮೂವತ್ತಾರು ಹೆರಾಯಿನ್ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ.

ಮುಂಜಾನೆ 2.30ರ ಸುಮಾರಿಗೆ ಗಡಿ ಕಾವಲುಗಾರರು ಕಳ್ಳಸಾಗಣೆದಾರರ ಚಲನವಲನವನ್ನು ಪತ್ತೆ ಹಚ್ಚಿದ್ದಾರೆ. ನಂತರ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನಿ ಮಾದಕವಸ್ತು ಕಳ್ಳಸಾಗಣೆದಾರರು ಕೊಲ್ಲಲ್ಪಟ್ಟರು ಹಾಗೂ  ಹೆರಾಯಿನ್ ಹೊಂದಿರುವ ಶಂಕಿತ 36 ಡ್ರಗ್ಸ್ ಪ್ಯಾಕೆಟ್‌ಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‌ಎಫ್‌ನ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಎಸ್‌ಪಿಎಸ್ ಸಂಧು ಪಿಟಿಐಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News