ಶ್ರೀರಂಗಪಟ್ಟಣ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ
Update: 2022-02-06 13:16 IST
ಶ್ರೀರಂಗಪಟ್ಟಣ: ನಾಲ್ಕು ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿರುವ ಘಟನೆ ಕೆ.ಆರ್. ಸಾಗರ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ (26), ರಾಜ್ (12), ಗೋವಿಂದ (8), ಕೋಮಲ್ (7), ಕುನಾಲ್(4) ಕೊಲೆಯಾದ ದುರ್ದೈವಿಗಳು ಎಂದು ತಿಳಿದುಬಂದಿದೆ.
ಕೃತ್ಯ ನಡೆಸಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದು, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಸ್ಥಳದಲ್ಲಿ ತಪಾಸಣೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಎನ್.ಯತೀಶ್ ಅವರು ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದರು.
ಈ ಬಗ್ಗೆ ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.