×
Ad

ಲತಾ ಮಂಗೇಶ್ಕರ್ ನಿಧನ: ದೇಶದಲ್ಲಿ ಎರಡು ದಿನ ಶೋಕಾಚರಣೆ ಘೋಷಿಸಿದ ಸರಕಾರ

Update: 2022-02-06 13:45 IST

ಹೊಸದಿಲ್ಲಿ: ಭಾರತ ರತ್ನ,  ಗಾನಕೋಗಿಲೆ ಲತಾ ಮಂಗೇಶ್ಕರ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾಗಿದ್ದು, ಭಾರತಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಬೈಗೆ ಆಗಮಿಸಿ ಲತಾ ಮಂಗೇಶ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಭಾರತದ ಕೋಗಿಲೆಗೆ ಗೌರವ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂಬೈಗೆ ಸಂಜೆ 4:15 ಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ದೇಶದಲ್ಲಿ  ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಸರಕಾರ ಘೋಷಿಸಿದೆ ಹಾಗೂ  ಭಾರತದಾದ್ಯಂತ ಎಲ್ಲಾ ಸರಕಾರಿ ಕಟ್ಟಡಗಳ ಮೇಲೆ ಧ್ವಜಗಳು ಅರ್ಧ ಮಟ್ಟಕ್ಕೆ ಹಾರುತ್ತವೆ.

ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News