×
Ad

''ಅಲ್ಲಿ ಸಿಧು, ಇಲ್ಲಿ ಸಿದ್ದು'': ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ

Update: 2022-02-06 17:09 IST

ಬೆಂಗಳೂರು: ''ಪಂಜಾಬ್‌ನಲ್ಲಿ ಚುನಾವಣೆಗೆ ದಿನಗಣನೆ ಆರಂಭವಾದರೂ ಬಂಡಾಯ ಶಮನವಾಗಿಲ್ಲ. ಅಲ್ಲಿ ಸಿಧು, ಇಲ್ಲಿ ಸಿದ್ದು. ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸುವುದಕ್ಕೆ ಇವರಿಬ್ಬರೇ ಸಾಕು'' ಎಂದು ಬಿಜೆಪಿ ಟೀಕಿಸಿದೆ.

ಈ ಕುರಿರತು ರವಿವಾರ ಟ್ವೀಟ್ ಮಾಡಿರುವ ಬಿಜೆಪಿ ,  ''ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ತೇಪೆ ಹಚ್ಚಲು ರಾಹುಲ್ ಗಾಂಧಿ ಅವರು ತಮ್ಮ ಆಪ್ತ ಸಲಹೆಗಾರರನ್ನೇ ಸಿದ್ದರಾಮಯ್ಯ ನಿವಾಸಕ್ಕೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತೀವ್ರ "ನಿಗಾ" ಘಟಕ ಸೇರುವಂತಾಗಿದೆಯೇ? '' ಎಂದು ಬಿಜೆಪಿ ವ್ಯಂಗ್ಯವಾಡಿದೆ. 

''ಕಾಂಗ್ರೆಸ್ ಪಕ್ಷಕ್ಕೆ ಪಂಚರಾಜ್ಯಗಳ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳಬೇಕೋ ಇಲ್ಲ ಸಿಧು, ಸಿದ್ದರಾಮಯ್ಯ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೋ ಎಂಬುದು ತಿಳಿಯದಾಗಿದೆ. ಇವರಿಬ್ಬರ ಜಗಳದಿಂದ ರಾಹುಲ್ ಗಾಂಧಿ ಅವರು ಬೇಸತ್ತು ಹೋಗಿದ್ದಾರೆ. ಪರಿಹಾರಕ್ಕಾಗಿ ಮತ್ತೊಂದು ವಿದೇಶ ಪ್ರವಾಸ ಮಾಡುವುದು ಖಚಿತವಾಗಿದೆ'' ಎಂದು ಬಿಜೆಪಿ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News