ಪಿಯು ಶಿಕ್ಷಣ ಇಲಾಖೆ ನಿರ್ದೆಶಕಿ ಸಹಿತ ನಾಲ್ವರು ಅಧಿಕಾರಿಗಳ ವರ್ಗಾವಣೆ
Update: 2022-02-06 17:41 IST
ಬೆಂಗಳೂರು, ಫೆ. 6: ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿಯಾಗಿದ್ದ ಆರ್.ಸ್ನೆಹಲ್ ಅವರು ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣದಿಂದಲೇ ನಿಯೋಜನೆಗೊಳ್ಳುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಮಚಂದ್ರನ್ ಆರ್.-ನಿರ್ದೇಶಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಗೋವಿಂದ ರೆಡ್ಡಿ-ಜಿಲ್ಲಾಧಿಕಾರಿ ಬೀದರ್, ರಾಹುಲ್ ಶಿಂಧೆ- ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಪುರ, ಸ್ಥಳ ನಿರೀಕ್ಷೆಯಲ್ಲಿದ್ದ ಸುರೇಶ್ ಹಿಟ್ನಾಳ್ ಅವರನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧಾರವಾಡ ಜಿಲ್ಲೆಗೆ ನಿಯೋಜನೆ ಮಾಡಲಾಗಿದೆ.