ಬೆಂಗಳೂರು: ರಾಜ್‍ಕುಮಾರ್ ಕಂಚಿನ ಪುತ್ಥಳಿ ಕಳವು; ದೂರು
Update: 2022-02-06 22:15 IST
ಬೆಂಗಳೂರು, ಫೆ. 6: ನಗರದ ಲುಂಬಿನಿ ಗಾರ್ಡನ್‍ನಲ್ಲಿ ನಿರ್ಮಿಸಲಾಗಿದ್ದ ವರನಟ ಡಾ.ರಾಜ್‍ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ದುಷ್ಕರ್ಮಿಗಳು ಕಳ್ಳತನ ಮಾಡಿರುವ ಘಟನೆ ಇಲ್ಲಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದು, ಜ.24 ರಂದು ರಾಜ್ ಪುತ್ಥಳಿ ಕಾಣೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ಎಲ್ಲ ಕಡೆ ಪರಿಶೀಲನೆ ನಡೆಸಿದರೂ ಪುತ್ಥಳಿ ಸಿಕ್ಕಿರಲಿಲ್ಲ. ದುಷ್ಕರ್ಮಿಗಳು ಪುತ್ಥಳಿಯನ್ನು ಕದ್ದಿರುವ ಅನುಮಾನದ ಮೇರೆಗೆ ಪೊಲೀಸರು ದೂರನ್ನು ದಾಖಲಿಸಿಕೊಂಡು, ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಅವರನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ತನಿಖೆ ಮುಂದುವರೆಸಿದ್ದಾರೆ.