ಪಂಜಾಬ್ ಚುನಾವಣೆ:‌ ಚರಣಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ

Update: 2022-02-06 18:22 GMT

ಲೂಧಿಯಾನಾ,ಫೆ.6: ರವಿವಾರ ಇಲ್ಲಿ ನಡೆದ ವರ್ಚುವಲ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಂಬರುವ ಪಂಜಾಬ ವಿಧಾನಸಭಾ ಚುನಾವಣೆಗೆ ಹಾಲಿ ಸಿಎಂ ಚರಣಜಿತ್ ಸಿಂಗ್ ಚನ್ನಿ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರು.

ರಾಹುಲ್ ಗಾಂಧಿಯವರ ನಿರ್ಧಾರವನ್ನು ತಾನು ಒಪ್ಪಿಕೊಳ್ಳುವುದಾಗಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಈ ಘೋಷಣೆಗೆ ಮುನ್ನ ಹೇಳಿದ್ದರು. ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಪರಿಗಣಿಸಲಾಗುತ್ತಿದೆ ಎಂಬ ವರದಿಗಳೂ ಹರಿದಾಡಿದ್ದವು.

‘ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ನನಗೆ ನೀಡಿದರೆ ಮಾಫಿಯಾವನ್ನು ಅಂತ್ಯಗೊಳಿಸುತ್ತೇನೆ ಮತ್ತು ಜನರ ಜೀವನವನ್ನು ಉತ್ತಮಗೊಳಿಸುತ್ತೇನೆ. ನನಗೆ ಅಧಿಕಾರ ನೀಡದಿದ್ದರೆ ಮುಗುಳ್ನಗೆಯೊಂದಿಗೆ ಮುಂದಕ್ಕೆ ಸಾಗುತ್ತೇನೆ ’ಎಂದು ಸಿಧು ಹೇಳಿದ್ದರು.

ಕಳೆದ ವರ್ಷದ ಸೆ.19ರಂದು ಅಧಿಕಾರಕ್ಕೇರಿದ ಚನ್ನಿ ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿದ್ದಾರೆ. ಚಮಕೌರ್ ಕ್ಷೇತ್ರದ ಶಾಸಕರಾಗಿರುವ ಅವರು ರಾಜ್ಯದ ತಾಂತ್ರಿಕ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪಂಜಾಬಿನಲ್ಲಿ ಫೆ.20ರಂದು ಏಕಹಂತದಲ್ಲಿ ಮತದಾನ ನಡೆಯಲಿದೆ. ಮಾ.10ರಂದು ಮತಗಳ ಎಣಿಕೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News