ಮಾಣಿ: ರಸ್ತೆ ಬದಿಯ ಹೊಟೇಲ್ ಗೆ ನುಗ್ಗಿದ ಕಾರು: ನಾಲ್ವರಿಗೆ ಗಾಯ, ಓರ್ವ ಗಂಭೀರ

Update: 2022-02-07 04:55 GMT

ಬಂಟ್ವಾಳ, ಫೆ.7: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೊಟೇಲ್ ಗೆ ನುಗ್ಗಿ, ಬಳಿಕ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಟೇಲ್ ಒಳಗೆ ನುಗ್ಗಿದೆ. ಪರಿಣಾಮ ಹೊಟೇಲ್ ಮಾಲಕ ರಿಯಾಝ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು‌ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಮೂವರು ಹೊಟೇಲ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News