×
Ad

ಫೆ.12: ಕಲ್ಲಾಪುವಿನಲ್ಲಿ ಸ್ವಾಭಿಮಾನಿ ಅಭಿಯಾನಕ್ಕೆ ಚಾಲನೆ

Update: 2022-02-07 22:42 IST

ಮಂಗಳೂರು, ಫೆ.7: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ದುರಾಡಳಿತವನ್ನು ಖಂಡಿಸಿ ರಾಜ್ಯಾದ್ಯಂತ ನಡೆಯುವ ಸ್ವಾಭಿಮಾನಿ ಅಭಿಯಾನಕ್ಕೆ ಫೆ.12ರಂದು ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ಯುನಿಟ್ ಹಾಲ್‌ನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಚಾಲನೆ ನೀಡಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಚಾಲಕ ಎಂ.ಬಿ. ಸದಾಶಿವ ಹೇಳಿದರು.

ಸೋಮವಾರ ನಗರದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರಕಾರವನ್ನು ಕಿತ್ತೊಗೆಯಲು ಜೆಡಿಎಸ್ ನಿರ್ಧರಿಸಿ ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಿಂದಲೇ ಆರಂಭಗೊಳ್ಳಲಿದೆ. ಆ ಬಳಿಕ ಬೇರೆ ಬೇರೆ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದೆ ಎಂದರು.

ಫೆ.12ರ ಸಂಜೆ 5ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರ ಮತ್ತು ರಾಜ್ಯದ ನಾಯಕರು ಭಾಗವಹಿಸಲಿದ್ದಾರೆ. ಅಭಿಯಾನದ ಮೂಲಕ ಪಕ್ಷವನ್ನು ಸಂಘಟಿಸಲಾಗುವುದು ಎಂದು ಎಂ.ಬಿ. ಸದಾಶಿವ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಮಾಜಿ ಅಧ್ಯಕ್ಷ ವಿಟ್ಲ ಮುಹಮ್ಮದ್ ಕುಂಞಿ, ವಸಂತ ಪೂಜಾರಿ, ಸುಶೀಲ್ ನೊರೊನ್ಹಾ, ಅಕ್ಷಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News