×
Ad

ಹಿಜಾಬ್ ಗೆ ವಿರೋಧ; ಕೇಸರಿ ಶಾಲು, ಪೇಟ ಧರಿಸಿ ಆಗಮಿಸಿದ ಉಡುಪಿ ಎಂಜಿಎಂ ಕಾಲೇಜಿನ ಕೆಲವು ವಿದ್ಯಾರ್ಥಿಗಳು

Update: 2022-02-08 11:54 IST

ಉಡುಪಿ : ಶಿರವಸ್ತ್ರ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಕೇಸರಿ ಶಾಲು, ಪೇಟ ಧರಿಸಿ ಬಂದ ವಿದ್ಯಾರ್ಥಿಗಳು ಕಾಲೇಜು ಪ್ರವೇಶಿಸದಂತೆ ತಡೆದು, ಪ್ರತಿಭಟನೆ ನಡೆಸಿದ ಘಟನೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ.

ಈ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಲವು ವರ್ಷದಿಂದ ಶಿರವಸ್ತ್ರ ಧರಿಸುತ್ತಿದ್ದರು. ಇದೀಗ ಅವರಿಗೆ ತಡೆಯೊಡ್ಡಲಾಗಿದ್ದು, ಅವರನ್ನು ಕಾಲೇಜು ಹಾಗು ತರಗತಿಗೆ ಪ್ರವೇಶಿಸದಂತೆ ತಡೆಯಲಾಗುತ್ತಿದೆ.

ಕಾಲೇಜು ಕ್ಯಾಂಪಸ್ ನಲ್ಲಿ ಬಿಗುವಿನ ವಾತಾವರಣವಿದ್ದು ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಶಿರವಸ್ತ್ರ ಧರಿಸಿ ಬಂದ ವಿದ್ಯಾರ್ಥಿನಿಯರು ತರಗತಿ ಒಳಗೆ ಪ್ರವೇಶಿಸದಂತೆ ತಡೆಯಲಾಗಿದ್ದು, ಅವರು ಕಾಲೇಜು ಕ್ಯಾಂಪಸ್ ನಲ್ಲಿ ನಿಂತಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News