''ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿಧ್ವಜ ಹಾರಿಸುವ ಅಗತ್ಯವೇನಿದೆ'': ಡಿ.ಕೆ ಶಿವಕುಮಾರ್ ಪ್ರಶ್ನೆ
ಬೆಂಗಳೂರು: ಶಿವಮೊಗ್ಗದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಸರಿ ಬಗ್ಗೆ ಎಲ್ಲರಿಗೂ ಗೌರವ ಇದೆ. ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೆ. ಹೀಗಿರುವಾಗ ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿಧ್ವಜ ಹಾರಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.
ಇಂದು ಅತ್ಯಂತ ದುಃಖದ ದಿನ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗಿನಿಂದ ಹಿಡಿದು ನನ್ನ 44 ವರ್ಷದ ಜೀವನದಲ್ಲಿ ಇಂದು ದುಃಖದ ದಿನ. ಶಿವಮೊಗ್ಗದಲ್ಲಿ ರಾಷ್ಟ್ರದ ಧ್ವಜ ಕೆಳಗೆ ಇಳಿಸಿ ಕೇಸರಿ ಧ್ವಜ ಹಾರಿಸ್ತಾರೆ. ನಮ್ಮ ರಾಷ್ಟ್ರಧ್ವಜ ಕೆಳೆಗೆ ಇಳಿಯುವುದನ್ನ ನೋಡಿ ನನಗೆ ಸಹಿಸಲಾಗಲಿಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಪರಿಸ್ಥಿತಿ ಕೈ ಮೀರಿದೆ. ಇದರ ಪರಿಣಾಮವಾಗಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಆನ್ಲೈನ್ ಶಿಕ್ಷಣ ಮುಂದುವರಿಸಿ, ಘಟನೆ ಜರುಗಿರುವ ಶಿಕ್ಷಣ ಸಂಸ್ಥೆಗಳನ್ನು ಒಂದು ವಾರ ಕಾಲ ಬಂದ್ ಮಾಡಬೇಕು.
— DK Shivakumar (@DKShivakumar) February 8, 2022