×
Ad

ಆತ್ಮರಕ್ಷಣಾ ಕಲೆ ಮೂಲಕ ದೌರ್ಜನ್ಯದಿಂದ ರಕ್ಷಣೆ: ಜಯಪ್ರಕಾಶ್ ಹೆಗ್ಡೆ

Update: 2022-02-08 19:50 IST

ಉಡುಪಿ, ಫೆ.8: ಹೆಣ್ಣುಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯದಿಂದ ರಕ್ಷಿಸಿಕೊಳ್ಳಲು ಕರಾಟೆಯಂಥ ಆತ್ಮರಕ್ಷಣಾ ಕಲೆಯು ಸಹಕಾರಿಯಾಗಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಮಂಗಳವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಓಬವ್ವ ಆತ್ಮರಕ್ಷಣೆ ಕಲೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯದಿಂದ ತಕ್ಷಣದಲ್ಲಿ ರಕ್ಷಿಸಿಕೊಳ್ಳಲು ಆತ್ಮ ರಕ್ಷಣೆ ಕಲೆ ನೆರವಾಗಲಿದೆ. ಆತ್ಮರಣೆಯಿಂದ ಆತ್ಮ ಸ್ಥೆರ್ಯ ಮೂಡಲಿದೆ. ಕರಾಟೆಯಿಂದ ದೈಹಿಕವಾಗಿ ಬಲಿಷ್ಠವಾಗುವ ಜೊತೆಗೆ ಮಾನಸಿಕವಾಗಿಯೂ ಆತ್ಮ ವಿಶ್ವಾಸದ ಮೂಲಕ ಬಲಿಷ್ಠರಾಗಲು ಸಾಧ್ಯವಿದೆ. ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಶಾಲಾ ಕಾಲೇಜುಳಲ್ಲಿ ಆರಂಭವಾಗಬೇಕು ಎಂದರು.

ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯದಿಂದ ತಕ್ಷಣದಲ್ಲಿ ರಕ್ಷಿಸಿಕೊಳ್ಳಲು ಆತ್ಮ ರಕ್ಷಣೆ ಕಲೆ ನೆರವಾಗಲಿದೆ. ಆತ್ಮರಕ್ಷಣೆಯಿಂದ ಆತ್ಮ ಸ್ಥೆರ್ಯ ಮೂಡಲಿದೆ. ಕರಾಟೆಯಿಂದ ದೈಹಿಕವಾಗಿ ಬಲಿಷ್ಠವಾಗುವ ಜೊತೆಗೆ ಮಾನಸಿಕ ವಾಗಿಯೂ ಆತ್ಮವಿಶ್ವಾಸದ ಮೂಲಕ ಬಲಿಷ್ಠರಾಗಲು ಸ್ಯಾವಿದೆ.ಈಕಾರ್ಯಕ್ರಮರಾಜ್ಯದಎಲ್ಲಾಶಾಲಾಕಾಲೇಜುಗಳಲ್ಲಿಆರಂವಾಗಬೇಕು ಎಂದರು.

ವಿದ್ಯಾರ್ಥಿಗಳು ಆನ್‌ಲೈನ್ ವಂಚನೆ ಕುರಿತಂತೆ ಎಚ್ಚರವಹಿಸುವಂತೆ ತಿಳಿಸಿದ ಜಯಪ್ರಕಾಶ್ ಹೆಗ್ಡೆ, ಯಾವುದೇ ಕಾರಣಕ್ಕೂ ತಮ್ಮ ಮೊಬೈಲ್‌ಗೆ ಬರುವ ಓಟಿಪಿಯನ್ನು ಇತರರಿಗೆ ನೀಡದಂತೆ ಕಿವಿ ಮಾತು ಹೇಳಿದರು.

ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಮಾತನಾಡಿ, ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳಿಗೆ ಹಲವು ಚಟುವಟಿಕೆಗಳನ್ನು ಕಲಿಯುವ ಆಸೆ ಇದ್ದರೂ, ಸಮಯದ ಕೊರತೆಯಿರುತ್ತದೆ. ಪ್ರಸ್ತುತ ಸರಕಾರವೇ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆಯನ್ನು ಕಲಿಸುತ್ತಿದ್ದು, ವಸತಿ ನಿಲಯಗಳಲ್ಲಿನ ಎಲ್ಲಾ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಬೇಕು. ಆತ್ಮರಕ್ಷಣೆ ಯಿಂದ ಆತ್ಮವಿಶ್ವಾಸ ಮೂಡುತ್ತದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ವರ್ಚುವಲ್ ಸಂದೇಶದ ಮೂಲಕ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೇವಿಂದ್ರ ಎಸ್ ಬಿರಾದಾರ ಸ್ವಾಗತಿಸಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಎಸ್.ಎಸ್. ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೇವಿಂದ್ರ ಎಸ್ ಬಿರಾದಾರ ಸ್ವಾಗತಿಸಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಎಸ್.ಎಸ್. ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು. ಜಿಲ್ಲೆಯ 7 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಂದ ಕರಾಟೆ ಪ್ರದರ್ಶನ ನಡೆಯಿತು. ಮೃಣಾಲಿನಿ ಸಚಿನ್ ಶೆಟ್ಟಿ ತರಬೇತಿ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News