×
Ad

ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು: ಹರಿಹರದಲ್ಲಿ ಪೊಲೀಸರಿಂದ ಲಾಠಿ ಚಾರ್ಜ್, ಗಾಳಿಯಲ್ಲಿ ಗುಂಡು!

Update: 2022-02-08 20:56 IST

ದಾವಣಗೆರೆ : ಹರಿಹರ ಜೆಸಿ ರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಿಜಾಬ್ – ಕೇಸರಿ ಶಾಲು ವಿಷಯವಾಗಿ ಗಲಾಟೆ ನಡೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರಿಂದ ಹಲವೆಡೆ ಕಲ್ಲು ತೂರಾಟ ನಡೆದಿದೆ.  

ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬೆಳಿಗ್ಗೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲು ಧರಿಸಿ ಬಂದು ತರಗತಿಗೆ ಹೋಗಲು ಮುಂದಾದಾಗ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಬುರ್ಖಾ ಹಾಗೂ ಹಿಜಾಬು ಧರಿಸಿ ಬಂದಿದ್ದ ವಿದ್ಯಾರ್ಥಿನಿಯರ ಪೋಷಕರು, ಸಹೋದರರೂ ಸಹ ಕಾಲೇಜಿಗೆ ಆಗಮಿಸಿದ್ದರು. ಈ ವೇಳೆ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳ ಜೊತೆ ವಾಗ್ವಾದ ನಡೆದಿದೆ.

ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮತ್ತು ಆಶ್ರುವಾಯು ಸಿಡಿಸಿ ಜನರನ್ನು ಚದುರಿಸಿದ್ದಾರೆ.

ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ.  

''ಸುಮೋಟೊ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು  ಈ ಘಟನೆ ಕಾರಣರಾದವರ ವಿರುದ್ದ ಕಾನೂನು ಕ್ರಮ ಜರಗಿಸಲಾಗುವುದು. ಈ ಸಂಬಂಧ ವಿಡಿಯೋ ಪರಿಶೀಲನೆ ನಡೆಸಲಾಗುವುದು ಇಂದಿನಿಂದ ದಾವಣಗೆರೆ ಮತ್ತು ಹರಿಹರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾರು ಅನಗತ್ಯವಾಗಿ ಹೊರಗೆ ಬರಬಾರದು. ಅನಗತ್ಯವಾಗಿ ಹೊರಬರುವುದು. ಘೋಷಣೆ ಕೂಗುವುದು ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು''

 ಸಿ.ಬಿ.ರಿಷ್ಯಂತ್- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News