×
Ad

ಹಿಜಾಬ್ ವಿವಾದ; ರಾಜಕೀಯ ಲಾಭದ ಅವಶ್ಯಕತೆ ಇಲ್ಲ: ಸಚಿವ ಎಸ್.ಅಂಗಾರ

Update: 2022-02-08 21:40 IST

ಉಡುಪಿ, ಫೆ.8: ಜನರಲ್ಲಿ ಸಂಘರ್ಷ ಉಂಟು ಮಾಡಿ ರಾಜಕೀಯ ಲಾಭ ಪಡೆಯುವ ಅವಶ್ಯಕತೆ ನಮಗೆ ಇಲ್ಲ ಎಂದು ಮೀನುಗಾರಿಕಾ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ಉಡುಪಿ ಜಿಪಂ ಕಚೇರಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಎಲ್ಲರೂ ಸಮಾನತೆಯನ್ನು ಕಾಪಾಡಬೇಕು. ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಬಗ್ಗೆ ಸರಕಾರ ಈಗಾಗಲೇ ಸ್ಪಷ್ಟವಾದ ಆದೇಶ ಹೊರಡಿಸಿದೆ. ಅದನ್ನು ಪಾಲಿಸಿ ದರೆ ಯಾವುದೇ ಗೊಂದಲಗಳು ಆಗುವುದಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News