×
Ad

ಪಡುಬಿದ್ರಿ: ಗ್ರಾಮ ಪಂಚಾಯತ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Update: 2022-02-08 22:29 IST

ಪಡುಬಿದ್ರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವುಂತೆ ಒತ್ತಾಯಿಸಿ ಹಾಗೂ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿಯಿ ದುರಾಡಳಿತ ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.

ಪಡುಬಿದ್ರಿ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕರ ಬೇಡಿಕೆಗಳು ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ಯೊಂದಿಗೆ ಗ್ರಾಮ ಪಂಚಾಯಿತಿಗೆ ಮುತ್ತಿಗೆಯನ್ನು ಹಾಕುವುದಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಎಚ್ಚರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಆಡಳಿತದ ಪಂಚಾಯಿತಿಯಲ್ಲಿ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಮನೆ ನಿವೇಶನಗಳು ಬಡವರಿಗೆ ಸಿಗುತ್ತಿಲ್ಲ. ನಿವೇಶನ ಹಕ್ಕುಪತ್ರ ನೀಡುತ್ತಿಲ್ಲ. ಕಸ ವಿಲೇವಾರಿಯನ್ನು ಸಮರ್ಪಕವಾಗಿ ಮಾಡಲಾ ಗುತ್ತಿಲ್ಲ. ಪಂಚಾಯತ್ ಎದುರು ಕಸದ ರಾಶಿಯನ್ನು ಹಾಕಲಾಗಿದೆ. ಸದಸ್ಯರ ಕಾನೂನ ಬದ್ಧ ಹಕ್ಕನ್ನು ಕಸಿದು ಕೊಳ್ಳಲಾಗುತ್ತಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ತಾರತಮ್ಯ, ಸದಸ್ಯರಿಗೆ ತಿಳಿಸದೇ ಅಧ್ಯಕ್ಷರು ತಾವಾಗಿಯೇ ಸಭೆಯನ್ನು ಕರೆಯುತ್ತಿ ರುವುದು, ಪಂಚಾಯತ್ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಳ್ಳದೆ ಗ್ರಾಮ ಪಂಚಾಯಿತಿ ಎದುರು ವಾಣಿಜ್ಯ ಕಟ್ಟಡ ನಿರ್ಮಾಣ, ಕ್ರಿಯಾ ಯೋಜನೆಯಲ್ಲಿರಿಸದೇ ಪಂಚಾಯತ್ ನಿಧಿಯ ದುರ್ಬಳಕೆ ಸಹಿತ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ದಲಿತ ನಾಯಕ ಶೇಖರ ಹೆಜಮಾಡಿ, ಪಂಚಾಯಿತಿ ಸದಸ್ಯರಾದ ನವೀನ್. ಎನ್. ಶೆಟ್ಟಿ, ಗಣೇಶ್ ಕೋಟ್ಯಾನ್, ಸ್ಥಾನೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಸ್ಥಳಕ್ಕಾಗಮಿಸಿದ ಕಾಪು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ಅವರಿಗೆ ಪ್ರತಿಭಟನಕಾರರು ಮನವಿ ಸಲ್ಲಿಸಿದರು. ಗ್ರಾಮ ಪಂಚಾಯಿತಿ ಪಿಡಿಒ ಪಂಚಾಕ್ಷರಿ ಸ್ವಾಮಿ, ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ನವೀನ್ ಚಂದ್ರ ಶೆಟ್ಟಿ, ದಿನೇಶ್ ಕೋಟ್ಯಾನ್, ಭಾಸ್ಕರ ಪಡುಬಿದ್ರಿ, ರಾಜೇಶ್ ಶೇರಿಗಾರ್, ಜ್ಯೋತಿ ಮೆನನ್, ಸುಚರಿತಾ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಾ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಬ್ಲಾಕ್ ಎಸ್‍ಸಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಸುಧಾಕರ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News