ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ರೈತರ ಸಾಲ ಮನ್ನಾ: ಪ್ರಿಯಾಂಕಾ ಗಾಂಧಿ
Update: 2022-02-09 13:46 IST
ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ. ನಿರುದ್ಯೋಗ ಮತ್ತು ಹಣದುಬ್ಬರವನ್ನು ದೊಡ್ಡ ಸಮಸ್ಯೆಗಳೆಂದು ಗುರುತಿಸಿದ್ದಾರೆ ಎಂದು NDTV ವರದಿ ಮಾಡಿದೆ.
ರೈತರು ಹೆಚ್ಚಿನ ಪ್ರಮಾಣದಲ್ಲಿರುವ ರಾಜ್ಯದ ಪಶ್ಚಿಮ ಭಾಗಗಳಲ್ಲಿ ಗುರುವಾರದಿಂದ ಮೊದಲ ಹಂತದ ಮತದಾನ ಆರಂಭವಾಗುವುದನ್ನು ಗಮನದಲ್ಲಿಟ್ಟುಕೊಂಡಿರುವ ಪ್ರಿಯಾಂಕಾ ಅವರು ಕಾಂಗ್ರೆಸ್ ಸರಕಾರವನ್ನು ರಚಿಸಿದ 10 ದಿನಗಳಲ್ಲಿ ಎಲ್ಲಾ ಕೃಷಿ ಸಾಲಗಳನ್ನು ಮನ್ನಾ ಮಾಡಲಾಗುವುದು ಎಂದು ಹೇಳಿದರು.
"ನಾವು ಇಲ್ಲಿಯವರೆಗೆ ಮೂರು ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ್ದೇವೆ. ಒಂದು ಮಹಿಳೆಯರಿಗೆ ಹಾಗೂ ಮತ್ತೊಂದು ಯುವಕರಿಗೆ. ಇಂದು ಮೂರನೆ ಪ್ರಣಾಳಿಕೆ ತಂದಿದ್ದೇವೆ. ಸಾರ್ವಜನಿಕರ ಸಲಹೆಗಳನ್ನು ಆಧರಿಸಿ ಪ್ರಣಾಳಿಕೆ ರಚಿಸಿದ್ದೇವೆ" ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.