ಹಿಜಾಬ್ ಪ್ರಕರಣದ ಸಮಸ್ಯೆ ನಿಭಾಯಿಸಲು ರಾಜ್ಯ ಸರಕಾರ ಸಂಪೂರ್ಣ ವಿಫಲ: ಹರೀಶ್ ಕುಮಾರ್

Update: 2022-02-09 09:39 GMT

ಮಂಗಳೂರು, ಫೆ.9: ಹಿಜಾಬ್ ಧಾರಣೆಯ ವಿಚಾರದಲ್ಲಿ ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಯನ್ನು ನಿಭಾಯಿಸಲು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಿಜಾಬ್‍ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ರಾಷ್ಟ್ರಧ್ವಜಕ್ಕೆ ಅವಮಾನ, ಅಗೌರವ ಉಂಟು ಮಾಡುವ ಕೃತ್ಯವನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ರಾಜ್ಯ ದಲ್ಲಿ ಹಿಜಾಬ್ ಧಾರಣೆಯ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ನಿಭಾಯಿಸಲು ರಾಜ್ಯ ಸರಕಾರ ವಿಫಲವಾಗಿರುವ ಹಿಂಸಾಚಾರ ನಡೆಯುತ್ತಿದೆ. ವಿದ್ಯಾರ್ಥಿಗಳ ಮೇಲೆ,ಶಿಕ್ಷಕರ ಮೇಲೆ ಹಲ್ಲೆ, ಚೂರಿ ಇರಿತದ ಘಟನೆಗಳು ನಡೆಯಲು ಕಾರಣವಾಗಿದೆ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಭಯದ ವಾತವರಣ ಸೃಷ್ಟಿಸಲಾಗುತ್ತಿದೆ. ಕಾಂಗ್ರೆಸ್ ರಾಜ್ಯದಲ್ಲಿ ಶಾಂತಿಯನ್ನು ಬಯಸುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೂ ಅವರ ಹಕ್ಕುಗಳ ರಕ್ಷಣೆಯೊಂದಿಗೆ ಶಾಲೆಗಳಲ್ಲಿ ಶಿಕ್ಷಣ ದೊರೆಯಬೇಕು. ಕಾಂಗ್ರೆಸ್ ನೊಂದವರ ನ್ಯಾಯದ ಪರ ಇದೆ. ಶಿಕ್ಷಣ ವ್ಯವಸ್ಥೆಯಲ್ಲಿ ಪಕ್ಷದ ರಾಜಕೀಯ ಇರಬಾರದು ಎನ್ನುವುದು ಕಾಂಗ್ರೆಸ್ ನಿಲುವು. ಯಾವುದೇ ಗಲಭೆಗೆ ಆಸ್ಪದ ಇರಬಾರದು. ಸರಕಾರ ಈ ಸಮಸ್ಯೆಯನ್ನು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಭಾಯಿಸಬೇಕು ಎನ್ನುವುದು ಕಾಂಗ್ರೆಸ್ ನಿಲುವು ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಪಂಜಿಮೊಗರು ಬಳಿಯ 40 ವರ್ಷಗಳ ಹಿಂದಿನ ಚರ್ಚ್ ಒಂದನ್ನು ಯಾವುದೇ ಸೂಚನೆ ನೀಡದೆ ಕೆಡವಿರುವ ಕ್ರಮವನ್ನು ಕಾಂಗ್ರೆಸ್ ಖಂಡಿಸುತ್ತದೆ. ಈ ಬಗ್ಗೆ ದೂರು ನೀಡಿದರೂ ಆರೋಪಿಗಳ ಮೇಲೆ ಎಫ್ಐಆರ್ ದಾಖಲಿಸದೆ ಇರುವುದು ವಿಷಾದನೀಯ. ಈ ಬಗ್ಗೆ ಸಮಗ್ರ ತನಿಖೆ ಯಾಗಬೇಕು ಎಂದು ಹರೀಶ್ ಕುಮಾರ್ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News