ಮುಂದೊಂದು ದಿನ ಭಗವಧ್ವಜವೇ ರಾಷ್ಟ್ರ ಧ್ವಜ ಆಗಬಹುದು: ಸಚಿವ ಈಶ್ವರಪ್ಪ

Update: 2022-02-09 12:25 GMT

ಬೆಂಗಳೂರು: ಯಾವತ್ತೋ ಒಂದು ದಿನ  ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದಾಗ ನಗುತ್ತಿದ್ದರು. ಈಗ ಕಟ್ಟಿದ್ದೇವೆಯಲ್ಲಾ, ಹಾಗೆಯೇ ಯಾವುದೋ ಒಂದು ಕಾಲದಲ್ಲಿ ಭಗವಾಧ್ವಜವೇ ರಾಷ್ಟ್ರ ಧ್ವಜ ಆಗಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  'ಕೇಸರಿ ಶಾಲನ್ನು ಜಗತ್ತಿನಲ್ಲಿ ಎಲ್ಲಿ ಬೇಕಾದ್ರೂ ಹಾರಿಸ್ತೇವೆ. ಈ ಹಿಂದೆ ರಾಮಚಂದ್ರ, ಮಾರುತಿ ರಥದ ಮೇಲೆ ಕೇಸರಿ ಧ್ವಜ ಇತ್ತು. ಈಗ ರಾಷ್ಟ್ರ ಧ್ವಜ ಫಿಕ್ಸ್ ಆಗಿದೆ. ಆದ್ದರಿಮದ ಅದಕಕ್ಕೆ ಎಲ್ಲರೂ ಗೌರವ ಕೊಡಲೇ ಬೇಕು. ರಾಷ್ಟ್ರ ಧ್ವಜಕ್ಕೆ ಅನ್ನ ತಿನ್ನುವ ಪ್ರತಿಯೊಬ್ಬನೂ ಗೌರವ ಕೊಡಬೇಕು' ಎಂದು ಹೇಳಿದ್ದಾರೆ. 

ರಾಷ್ಟ್ರ ಧ್ವಜಕ್ಕೆ ಯಾವ ಸಂದರ್ಭದಲ್ಲಿ ಎಲ್ಲಿ ಹಾರಿಸಬೇಕು ಎಂದು ಇತಿಮಿತಿ ಇದೆ. ಶಿವಮೊಗ್ಗ ಕಾಲೇಜಿನಲ್ಲಿ  ರಾಷ್ಟ್ರ ಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸುಳ್ಳು ಹೇಳಿದ್ದಾರೆ ಎಂದು ಸಚಿವರು ಹೇಳಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News