ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟ ನೀತಿ ವಿರೋಧಿ ಅಣ್ಣಾ ಹಜಾರೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

Update: 2022-02-09 12:56 GMT

ಪುಣೆ: ಸೂಪರ್ ಮಾರ್ಕೆಟ್‍ಗಳು ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿಸುವ ರಾಜ್ಯ ಸರಕಾರದ ನೀತಿಯನ್ನು ಖಂಡಿಸಿ ತಾವು ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಅಣ್ಣಾ ಹಜಾರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಇನ್ನೊಂದು `ಜ್ಞಾಪನಾ ಪತ್ರ' ಬರೆದಿದ್ದಾರೆ.  ಸರಕಾರ ತನ್ನ ಈ ಹೊಸ ನೀತಿಯನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಜನರು ಬಯಸಿದ್ದಾರೆ ಎಂದು 84 ವರ್ಷದ ಹಜಾರೆ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸರಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆಯದೇ ಇದ್ದಲ್ಲಿ ಅಹ್ಮದ್‍ನಗರ್ ಜಿಲ್ಲೆಯ ತಮ್ಮ ಗ್ರಾಮ ರಾಲೆಗಾಂವ್ ಸಿದ್ದಿಯಲ್ಲಿ ಫೆಬ್ರವರಿ 14ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗೆ ಈಗಾಗಲೇ ಎರಡು ಪತ್ರಗಳನ್ನು ಬರೆದಿದ್ದರೂ ಪ್ರತಿಕ್ರಿಯೆ ದೊರಕಿರಲಿಲ್ಲ ಎಂದು ಅವರು ದೂರಿದ್ದಾರೆ. ಸರಕಾರದ ಇಂತಹ ಒಂದು ನಿರ್ಧಾರ ಭವಿಷ್ಯದ ತಲೆಮಾರುಗಳಿಗೆ ಅಪಾಯಕಾರಿಯಾಗಿದೆ ಎಂದು ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News