×
Ad

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಆರೋಪ: ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ದೂರು

Update: 2022-02-09 18:38 IST

ಬೆಂಗಳೂರು: ಜನರ ನಡುವೆ ದ್ವೇಷ ಉಂಟು ಮಾಡುವ, ಸಮಾಜದಲ್ಲಿ ಶಾಂತಿ ಕದಡುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್  ಮಾಡಿದ ಅಪರಾಧಕ್ಕಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಡಿ.ಕೆ.ಶಿವಕುಮಾರ್ ರವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ಕರ್ನಾಟಕ ಡಿಜಿಪಿ ಮತ್ತು ಐಜಿಪಿ ರವರಿಗೆ ಇಂದು ದೂರು ಸಲ್ಲಿಸಲಾಯಿತು, ಶಿವಕುಮಾರ್ ರವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಂಡು ಇನ್ನು ಮುಂದೆ ಅವರು ಈ ರೀತಿ ಸುಳ್ಳು ಸುದ್ದಿಗಳನ್ನು ಪೋಸ್ಟ್  ಮಾಡದಂತೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ.

ಹಿಂಸೆ, ದ್ವೇಷ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮಾದರಿಯ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್  ಮಾಡಲಾಗುತ್ತಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠ ಆಕ್ಷೇಪಿಸಿದೆ.

ದೂರು ನೀಡುವ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ, ಬೆಂಗಳೂರು ದಕ್ಷಿಣ ಜಿಲ್ಲೆ ಕಾನೂನು ಪ್ರಕೋಷ್ಠದ ಸಂಚಾಲಕರಾದ ಯಶವಂತ್ ಎಂ ಮತ್ತು ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ವಿನೋದ್ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News