×
Ad

ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Update: 2022-02-09 21:20 IST

ಉಡುಪಿ, ಫೆ.9: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲ ಪಾಯ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2021ನೇ ಸಾಲಿನ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಲು ಫೆ.23 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂಖ್ಯೆ: 080-22113146ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News