×
Ad

ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಆರಂಭ

Update: 2022-02-09 21:59 IST

ಮಂಗಳೂರು, ಫೆ.9: ಹಿರಿಯ ನಾಗರಿಕರಿಗಾಗಿ ರಾಜ್ಯವು ಕೇಂದ್ರ ಸರಕಾರದೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಬೆಂಗಳೂರಿನಲ್ಲಿರುವ ನೈಟಿಂಗೇಲ್ ಮೆಡಿಕಲ್ ಟ್ರಸ್ಟ್ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿಯನ್ನು ಆರಂಭಿಸಿದೆ.

ಈ ಸಹಾಯವಾಣಿಯ ಸಂಖ್ಯೆ-14567 ಆಗಿದ್ದು, ಕರೆ ಸಂಪೂರ್ಣ ಉಚಿತವಾಗಿರುತ್ತದೆ. ಹಿರಿಯ ನಾಗರಿಕರು ಯೋಜನೆಗಳ ಬಗ್ಗೆ ಮಾಹಿತಿ, ಕಾಯ್ದೆಗಳ ಬಗ್ಗೆ ಅರಿವು, ಆರೋಗ್ಯ, ಕೌಟುಂಬಿಕ, ಆರ್ಥಿಕ ಹಾಗೂ ಕಾನೂನಾತ್ಮಕ ಸಮಸ್ಯೆಗಳನ್ನು ಹೊಂದಿರುವ ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾದಂತಹ ನಾಗರಿಕರಿಗೆ ಸಲಹೆ ಮಾರ್ಗದರ್ಶನ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿಗೆ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, (ವಿಶ್ವಾಸ್‌ಟ್ರಸ್ಟ್) ಪಾಂಡೇಶ್ವರ, ದೂ.ಸಂ:2421190, 2436681 ಹಾಗೂ ಉಚಿತ ದೂ.ಸಂ:1090 ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ದೂ.ಸಂ: 0824-2458173 ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News