×
Ad

ಪ್ರ್ರಥಮ ದರ್ಜೆ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Update: 2022-02-09 22:59 IST

ಬೆಂಗಳೂರು, ಫೆ. 9: ‘ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾಗಿದ್ದ, 2019ನೆ ಸಾಲಿನ ಹೈದ್ರಾಬಾದ್ ಕರ್ನಾಟಕ ವೃಂದದ-137 ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಫೆ.8ರಂದು ಆಯೋಗದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಗಳ ಮಾಹಿತಿಗಾಗಿ http://kpsc.kar.nic.in-List-Provisional Selection List ನಲ್ಲಿ ಪ್ರಕಟಿಸಲಾಗಿದೆ.ತಾತ್ಕಾಲಿಕ ಆಯ್ಕೆಪಟ್ಟಿಯ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-01 ಇವರಿಗೆ ಲಿಖಿತ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಬೇಕು ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News