×
Ad

ಹಿಜಾಬ್‌ ಪ್ರಕರಣದ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿದ ಫುಟ್ಬಾಲ್‌ ತಾರೆ ಪೌಲ್ ಪೋಗ್ಬಾ

Update: 2022-02-10 18:35 IST
Photo credit: instagram.com/paulpogba

ಫುಟ್ಬಾಲ್‌ ತಾರೆ, ಮ್ಯಾಂಚೆಸ್ಟರ್ ಯುನೈಟೆಡ್ (Manchester United) ಆಟಗಾರ ಪೌಲ್ ಪೋಗ್ಬಾ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಪೋಗ್ಬಾ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.  ಅದು ಕೇಸರಿ ಶಾಲು ಹೊಂದಿದ್ದ ಗುಂಪೊಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ತೋರಿಸುತ್ತದೆ.

ಕಾಲೇಜುಗಳಲ್ಲಿ ಹಿಜಾಬ್‌ಗಳ ನಿಷೇಧವನ್ನು ವಿರೋಧಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟಿನ ತ್ರಿಸದಸ್ಯ ಪೀಠವು ಹಿಜಾಬ್ ಸರಣಿಯ ಅರ್ಜಿಗಳ ವಿಚಾರಣೆ ನಡೆಸಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವಂತೆ ಸರ್ಕಾರಕ್ಕೆ ಗುರುವಾರ ನಿರ್ದೇಶನ ನೀಡಿದೆ. 

ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದ್ದು, ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಉಡುಗೆಗಳನ್ನು ಧರಿಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: "ಪರ್ದಾ ಭಾರತೀಯ ಸಂಸ್ಕೃತಿಯ ಭಾಗ": ಮುಸ್ಕಾನ್‌ ಗೆ ಬೆಂಬಲ ವ್ಯಕ್ತಪಡಿಸಿದ ಆರೆಸ್ಸೆಸ್‌ ನ ಮುಸ್ಲಿಮ್‌ ರಾಷ್ಟ್ರೀಯ ಮಂಚ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News