×
Ad

ವಿಧಾನಮಂಡಲ ಅಧಿವೇಶನ ಹಿನ್ನೆಲೆ: ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

Update: 2022-02-10 20:51 IST

ಬೆಂಗಳೂರು, ಫೆ.10: ವಿಧಾನಮಂಡಲ ಅಧಿವೇಶನ ನಡೆಯುವುದರಿಂದ ಫೆ.14ರಿಂದ ಫೆ.25ರವರೆಗೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಅಧಿವೇಶನ ನಡೆಯುವ ವಿಧಾನಸೌಧದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ.

ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ಸೇರುವುದು, ಸ್ಫೋಟಕ ಸಿಡಿಸುವುದು, ಪ್ರತಿಕೃತಿ ದಹನ, ಘೋಷಣೆಗಳನ್ನು ಕೂಗುವುದು, ಶಸ್ತ್ರಾಸ್ತ್ರ ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದೂ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News