×
Ad

ವಿದ್ಯಾರ್ಥಿಗಳ ಖಾಸಗಿ ದತ್ತಾಂಶ ಸೋರಿಕೆ ಆರೋಪ : ಕ್ರಮಕ್ಕೆ ಎಸ್‌ಐಓ ಮನವಿ

Update: 2022-02-11 20:26 IST

ಉಡುಪಿ, ಫೆ.11: ವಿದ್ಯಾರ್ಥಿಗಳ ಖಾಸಗಿ ಮಾಹಿತಿಯನ್ನೊಳಗೊಂಡ ಕಾಲೇಜಿನ ದತ್ತಾಂಶ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ದತ್ತಾಂಶ ಸೋರಿಕೆಗೆ ಕಾರಣರಾದ ವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್‌ಐಓ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಹಾಗೂ ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಮೂಲಕ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು, ಮಹಿಳಾ ಹಕ್ಕು ಆಯೋಗಕ್ಕೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಸೋರಿಕೆಯಾದ ದತ್ತಾಂಶದಲ್ಲಿ ವಿದ್ಯಾರ್ಥಿನಿಯರ ಖಾಸಗಿ ಮಾಹಿತಿಗಳಿದ್ದು ಅದನ್ನು ಕೆಲವು ದುಷ್ಕರ್ಮಿಗಳು ದುರುಪಯೋಗ ಪಡಿಸಿಕೊಂಡು ಕಿರುಕುಳ ನೀಡುತ್ತಿರುವ ಕುರಿತು ವಿದ್ಯಾರ್ಥಿನಿಯರು ಈಗಾಗಲೇ ಮಾಧ್ಯಮ ಗಳಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಖಾಸಗಿ ಮಾಹಿತಿಯ ಗೌಪ್ಯತೆಯ ಕಾಯ್ದುಕೊಳ್ಳುವುದು ಆಯಾ ಕಾಲೇಜಿನ ಆದ್ಯ ಕರ್ತವ್ಯ. ಆದರೆ ಇಲ್ಲಿ ಕಾಲೇಜು ಸ್ಪಷ್ಟವಾಗಿ ನಿಯಮ ಉಲ್ಲಂಘನೆ ಮಾಡಿದ್ದು ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಎಸ್‌ಐಓ ಮನವಿಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News