ಪಚ್ಚನಾಡಿ ತ್ಯಾಜ್ಯ ನಿರ್ವಹಣೆ ಲೋಪ: ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

Update: 2022-02-11 15:43 GMT

ಬೆಂಗಳೂರು, ಫೆ.11: ಮಂಗಳೂರಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಹಲವು ಕಾರಣಗಳನ್ನು ನೀಡಿ ಮುಂದೂಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಸರಕಾರಕ್ಕೆ ಸಂವೇದನೆ ಎಂಬುದೇ ಇಲ್ಲ ಎಂದು ಮೌಖಿಕವಾಗಿ ಹೇಳಿದೆ. 

ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. 

ರಾಜ್ಯ ಸರಕಾರದ ಪರ ವಾದಿಸಿದ ವಕೀಲರು, ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ. ಅಲ್ಲದೆ, 50 ಕೋಟಿ ರೂ.ಮೊತ್ತದ ಟೆಂಡರ್ ಗೆ  ಅನುಮೋದನೆ ಪಡೆಯಲು ಕಡತವನ್ನು ಸಂಪುಟದ ಸಭೆಯ ಮುಂದೆ ಮಂಡಿಸಲಾಗಿದೆ. ಸಂಪುಟ ಒಪ್ಪಿಗೆ ನೀಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ 10 ದಿನ ಕಾಲಾವಕಾಶ ನೀಡಬೇಕೆಂದು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News