×
Ad

ಜಯಲಲಿತಾ ಆಪ್ತೆ ಶಶಿಕಲಾರಿಂದ ಲಂಚ ಪಡೆದ ಪ್ರಕರಣ: ಜೈಲಾಧಿಕಾರಿ ವಿರುದ್ಧದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

Update: 2022-02-11 23:06 IST

ಬೆಂಗಳೂರು, ಫೆ.11: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಕಲ್ಪಿಸಲು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಬೆಳಗಾವಿ ಕಾರಾಗೃಹ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಪೂರ್ವಾನುಮತಿ ನೀಡಿದ ಸರಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ತಮ್ಮ ವಿರುದ್ಧ ಪ್ರಾಸಿಕ್ಯೂಷನ್‍ಗೆ ಪೂರ್ವಾನುಮತಿ ನೀಡಿರುವ ಸರಕಾರದ ಆದೇಶ ರದ್ದುಪಡಿಸುವಂತೆ ಕೋರಿ ಕೃಷ್ಣಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ತಡೆಯಾಜ್ಞೆ ನೀಡಿ ಆದೇಶಿಸಿದೆ. ಅಲ್ಲದೆ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.  

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಬಂಧೀಖಾನೆ ಅಧೀನ ಕಾರ್ಯದರ್ಶಿ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹೆಚ್ಚುವರಿ ಮಹಾನಿರ್ದೇಶಕ ಮತ್ತು ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ.ವಿಚಾರಣೆ ವೇಳೆ 

ಅರ್ಜಿದಾರ ಪರ ಹಿರಿಯ ವಕೀಲ ಎ. ಎಸ್ ಪೊನ್ನಣ್ಣ ವಾದಿಸಿ, ಯಾವುದೇ ನಿರ್ದಿಷ್ಟ ಆರೋಪವಿಲ್ಲದ ಸಂದರ್ಭದಲ್ಲಿ ಕಾರಾಗೃಹ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ಕ್ರಮ ಕಾನೂನು ಬಾಹಿರ ಎಂದರು. ವಾದ ಆಲಿಸಿದ ಪೀಠ ಮುಂದಿನ ವಿಚಾರಣೆವರೆಗೂ ಸರಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News