ಫೆ. 14,15ರಂದು ಪಿಯು ಕಾಲೇಜಿಗೆ ರಜೆ
Update: 2022-02-12 12:57 IST
ಬೆಂಗಳೂರು : ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಫೆ.14 ಮತ್ತು 15ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಉಪಕಾರ್ಯದರ್ಶಿ ಶೇಖರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.