ಮುಂಬೈ: ವ್ಯಕ್ತಿಯನ್ನು ಹತ್ಯೆಗೈದು 7ನೇ ಮಹಡಿಯಿಂದ ಎಸೆದ ಪ್ರಕರಣ; ಪತ್ನಿ, ಪುತ್ರ ಬಂಧನ
ಮುಂಬೈ: ಮುಂಬೈನ ಅಂಬೋಲಿ ಪ್ರದೇಶದಲ್ಲಿ 54 ವರ್ಷದ ವ್ಯಕ್ತಿಯೊಬ್ಬನ್ನು ಕೊಂದು ಅವರ ಶವವನ್ನು ಕಟ್ಟಡದ ಏಳನೇ ಮಹಡಿಯಿಂದ ಎಸೆಯಲಾಗಿದ್ದು, ಈ ಕೃತ್ಯ ಎಸಗಿದ ವ್ಯಕ್ತಿಯ ಪತ್ನಿ ಹಾಗೂ ಮಗನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮಹಿಳೆ ಹಾಗೂ ಆಕೆಯ ಮಗನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶಂತನುಕೃಷ್ಣ ಶೇಷಾದ್ರಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾನೆ ಎಂದು ಈ ಇಬ್ಬರು ಪೊಲೀಸರಿಗೆ ತಿಳಿಸಿದ್ದರು. ಈ ಹಿಂದೆಯೂ ಶೇಷಾದ್ರಿ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎಂದು ಹೇಳಿದ್ದರು.
ಆದರೆ, ತನಿಖೆ ವೇಳೆ ತಾಯಿ-ಮಗ ಸುಳ್ಳು ಹೇಳುತ್ತಿರುವುದು ಪೊಲೀಸರಿಗೆ ಗೊತ್ತಾಗಿದೆ. ಇವರಿಬ್ಬರು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಕಲಹವೇ ಆಘಾತಕಾರಿ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಪ ಪೊಲೀಸ್ ಆಯುಕ್ತ ಮಂಜುನಾಥ ಶಿಂಗೆ ತಿಳಿಸಿದ್ದಾರೆ.