ಹೈಕೋರ್ಟ್ ಪ್ರಕರಣಕ್ಕೂ ಶಾಲೆ-ಕಾಲೇಜು ಪ್ರಾರಂಭಕ್ಕೂ ಸಂಬಂಧವಿಲ್ಲ: ಸಚಿವ ಡಾ.ಅಶ್ವತ್ಥ ನಾರಾಯಣ

Update: 2022-02-12 12:49 GMT
ಸಚಿವ ಡಾ.ಅಶ್ವತ್ಥ ನಾರಾಯಣ 

ಕಲಬುರಗಿ, ಫೆ. 12: ಹೈಕೋರ್ಟ್‍ನಲ್ಲಿರುವ ಸಮವಸ್ತ್ರ ಪ್ರಕರಣಕ್ಕೂ ಶಾಲಾ-ಕಾಲೇಜು ಪ್ರಾರಂಭಕ್ಕೂ ಸಂಬಂಧವಿಲ್ಲ. ಕಾಲೇಜುಗಳು ಶೀಘ್ರದಲ್ಲಿ ಪ್ರಾರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ಸ್ಪಷ್ಟಣೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳ ಪ್ರಾರಂಭದ ಬಗ್ಗೆ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಕಾನೂನು ಸುವ್ಯವಸ್ಥೆ ನೋಡಿಕೊಂಡು ಶೀಘ್ರದಲ್ಲಿ ಕಾಲೇಜುಗಳು ಪ್ರಾರಂಭ ಮಾಡುತ್ತೇವೆ. ಸದ್ಯ ಆನ್ ಲೈನ್‍ನಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಇದೇ ವೇಳೆ ವಿವರಣೆ ನೀಡಿದರು.

ಗೃಹ ಇಲಾಖೆ ಸಲಹೆ ಮೇರೆಗೆ ಶೀಘ್ರದಲ್ಲಿ ಕಾಲೇಜುಗಳು ಪ್ರಾರಂಭಿಸಲಾಗುತ್ತದೆ. ಹಿಜಾಬ್(ಸ್ಕಾರ್ಫ್) ವಿಚಾರದಲ್ಲಿ ಬಿಜೆಪಿ ಯಾವುದೇ ಸಂದರ್ಭದಲ್ಲಿಯೂ ರಾಜಕೀಯ ಮಾಡುವುದಿಲ್ಲ, ಪ್ರತಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ವಿಚಾರದಲ್ಲಿ ಯಾರು ರಾಜಕೀಯ ಪ್ರೇರಿತವಾಗಿ ಮಾತನಾಡುತ್ತಿದ್ದರೆಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

ಬಿಡಿಎ ನಿವೇಶನ ಹಗರಣ: ಬಿಡಿಎ ನಿವೇಶನ ಹಂಚಿಕೆ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ, ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗತ್ತದೆ. ತನಿಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು ಸರಕಾರ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ರೀತಿಯಲ್ಲಿ ನಿಶ್ಚಿತವಾಗಿಯೂ ಕ್ರಮ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಣೆ ನೀಡಿದರು.

ಇದನ್ನೂ ಓದಿ: ಚಲಿಸುವ ರೈಲಿನ ಮುಂದೆ ಜಿಗಿದು ಹಳಿಯಲ್ಲಿ ಬಿದ್ದಿದ್ದ ಯುವತಿಯನ್ನು ರಕ್ಷಿಸಿದ ಮುಹಮ್ಮದ್‌ ಮೆಹಬೂಬ್‌ !

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News