ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಸ್ಸಾಂ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ
ಮಂಗಳೂರು : ಅಸ್ಸಾಂ ಬಿಜೆಪಿ ಮುಖ್ಯಮಂತ್ರಿಯಾದ ಹಿಮಂತ್ ಬಿಸ್ವ ಶರ್ಮ ರವರು ಉತ್ತರಖಂಡ ಚುನಾವಣೆ ಪ್ರಚಾರದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಮತ್ತು ಹಗುರವಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂದು ಜೆಪ್ಪು ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಇದರ ನೇತೃತ್ವವನ್ನು ಯುವ ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕ ಎಸ್. ಕೆ. ಸವಾನ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ರಮಾನಂದ ಪೂಜಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಲೀಂ, ಉಪಾಧ್ಯಕ್ಷರಾದ ಸದಾಶಿವ ಅಮೀನ್, ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ರಾವ್, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ದುರ್ಗಾ ಪ್ರಸಾದ್, ಹೈದರ್, ನವಜ್ ಜೆಪ್ಪು, ಮಾಜಿ ಉಪಮೇಯರ್ ಕವಿತಾ ಹಾಗೂ ಯುವ ಕಾಂಗ್ರೆಸ್ ನಾಯಕರಾದ ನಾಗೇಂದ್ರ, ಪ್ರತೀಕ್, ಕೌಶಿಕ್, ಶಫೀಕ್, ಗೌತಮ್ ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.