ಗೋಮಟೇಶ್ವರ ಮೂರ್ತಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಅಯ್ಯೂಬ್ ಖಾನ್ ಬಂಧನ
Update: 2022-02-12 22:13 IST
ಮೈಸೂರು, ಫೆ.12: ಗೋಮಟೇಶ್ವರ ಮೂರ್ತಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದಡಿ ನ್ಯೂ ಇಂಡಿಯನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಯ್ಯೂಬ್ ಖಾನ್ ರನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಶನಿವಾರ ಸಂಜೆ ಅಯ್ಯೂಬ್ ಖಾನ್ ಅವರನ್ನು ವಶಕ್ಕೆ ಪಡೆದಿರುವ ಉದಯಗಿರಿ ಪೊಲೀಸರು, 153-ಎ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಗೋಮಟೇಶ್ವರ ಮೂರ್ತಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಜೈನ ಸಮುದಾಯದವರು ಅಯ್ಯೂಬ್ ಖಾನ್ ವಿರುದ್ಧ ಮೈಸೂರು ನಗರ ಪೊಲಿಸ್ ಆಯುಕ್ತರಿಗೆ ದೂರು ನೀಡಿದ್ದರು. ಇದರ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ಉದಯಗಿರಿ ಪೊಲೀಸರು ಅಯ್ಯೂಬ್ ಖಾನ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.