×
Ad

ಹಿಂದುಳಿದ ವರ್ಗಗಳಿಗೆ ಮೀಸಲಾತಿ;ಸ್ಥಿತಿಗತಿ ಚರ್ಚಿಸಲು ಸಭೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-02-12 22:18 IST

ಬೆಂಗಳೂರು, ಫೆ. 12: ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅದರ ಪರಿಣಾಮಗಳು ಹಾಗೂ ರಾಜ್ಯದ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಉಳಿಸಿಕೊಂಡು ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಯಾವ ರೀತಿ ಮಾಡಬೇಕೆಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News