ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: ಆರೋಪಿಯ ಬಂಧನ
Update: 2022-02-12 22:23 IST
ಬೆಂಗಳೂರು, ಫೆ.12: ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯನ್ನು ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನೆತಾಯಿಚಾಂದ್ ಜಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನನಗೆ ದೊಡ್ಡ ಅಧಿಕಾರಿಗಳ ಪರಿಚಯವಿದ್ದು, ನಿಮಗೆ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.