ನ್ಯಾಯಾಲಯದ ಆವರಣದಲ್ಲಿ ದುರ್ವರ್ತನೆ ಆರೋಪ: ವಕೀಲ ಜಗದೀಶ್ ಬಂಧನ

Update: 2022-02-13 04:16 GMT

ಬೆಂಗಳೂರು, ಫೆ.13: ನ್ಯಾಯಾಲಯದ ಆವರಣದಲ್ಲಿ ನಡೆದ ವಕೀಲರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ‌.

ವಕೀಲ ಜಗದೀಶ್ ನ್ಯಾಯಾಲಯದ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ‌ ಆರೋಪಿಸಿ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಶನಿವಾರ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​​ಗೆ ದೂರು ನೀಡಿತ್ತು.

ಜಗದೀಶ್ ಅವರನ್ನು ಪೊಲೀಸರು ಇಂದು‌ ಸಂಜೆಯೊಳಗೆ ಕೋರಮಂಗಲ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಪ್ರಕರಣವೊಂದರ ಸಂಬಂಧ ಶುಕ್ರವಾರ ಬೆಳಗ್ಗೆ ಸಿಟಿ ಸಿವಿಲ್ ಕೋರ್ಟ್‌ಗೆ ದಾಖಲೆ ಸಲ್ಲಿಸಲು ಹೋದಾಗ ಕೆಲವರು ತನ್ನ ಮೇಲೆ ಹಾಗೂ ಪುತ್ರ ಸೇರಿದಂತೆ ಆಪ್ತರ ಮೇಲೆ ಹಲ್ಲೆ ನಡೆಸಿದ್ದಾರೆಂದು ಜಗದೀಶ್ ಆರೋಪಿಸಿದ್ದರು. ಇದಾದ ನಂತರ ಶನಿವಾರ ವಕೀಲರ ಸಂಘವು ಜಗದೀಶ್ ವಿರುದ್ಧ ಪೊಲೀಸ್‌ ಆಯುಕ್ತರಿಗೆ ದೂರು ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News