ಪಂಜಾಬ್ ನಲ್ಲಿ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಪದವಿ ಕಳೆದುಕೊಳ್ಳಲು ಕಾರಣವನ್ನು ಬಿಚ್ಚಿಟ್ಟ ಪ್ರಿಯಾಂಕಾ ಗಾಂಧಿ
ಹೊಸದಿಲ್ಲಿ:ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ದಿಲ್ಲಿ ಬಿಜೆಪಿ ಸರಕಾರದ ನಡುವೆ ಗುಪ್ತ ಮೈತ್ರಿ ಇತ್ತು ಎಂದು ರವಿವಾರ ಪಂಜಾಬ್‌ನ ಕೋಟ್ಕಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು.
“ಕಳೆದ ಐದು ವರ್ಷಗಳಿಂದ ಪಂಜಾಬ್‌ನಲ್ಲಿ ನಾವು ಕಾಂಗ್ರೆಸ್ ಸರಕಾರವನ್ನು ಹೊಂದಿದ್ದೇವೆ. ಈ ಸರಕಾರವು ಪಂಜಾಬ್‌ನಿಂದ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತ್ತು. ಬದಲಿಗೆ ದಿಲ್ಲಿಯಿಂದ ಕಾರ್ಯನಿರ್ವಹಿಸುತ್ತಿತ್ತು. ಕಾಂಗ್ರೆಸ್‌ನಿಂದ ಅಲ್ಲ, ಆದರೆ ಬಿಜೆಪಿಯಿಂದ ಕಾರ್ಯನಿರ್ವಹಿಸುತ್ತಿತ್ತು. ಆ ಗುಪ್ತ ಸಂಬಂಧ ಇಂದು ಬಹಿರಂಗವಾಗಿದೆ. ಆದ್ದರಿಂದಲೇ ನಾವು ಆ ಸರಕಾರವನ್ನು ಬದಲಾಯಿಸಬೇಕಾಯಿತು’’ ಎಂದು ‘ನವಿ ಸೋಚ್ ನವ ಪಂಜಾಬ್’ ಚುನಾವಣಾ ರ್ಯಾಲಿಯಲ್ಲಿ ಪ್ರಿಯಾಂಕಾ ಹೇಳಿದರು.
ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ, ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರು ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ರಚಿಸಿದ್ದರು, ಇದು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಕಳೆದ ವರ್ಷ ಕೇಂದ್ರದ ಮೂರು ವಿವಾದಾಸ್ಪದ ಕೃಷಿ ಕಾನೂನುಗಳ ವಿರುದ್ಧದ ಆಂದೋಲನದ ಸಮಯದಲ್ಲಿ ರೈತರ ಬೇಡಿಕೆಗಳನ್ನು ಪರಿಹರಿಸಲು ಬಿಜೆಪಿಯು ಸ್ವಲ್ಪವೂ ಪ್ರಯತ್ನ ಮಾಡಲಿಲ್ಲ ಎಂದು ಆರೋಪಿಸಿದ ಪ್ರಿಯಾಂಕಾ, ಪಂಜಾಬ್ ಬಿಜೆಪಿ ಪಕ್ಷವನ್ನು ಏನೆಂಬುದನ್ನು ನೋಡಿದೆ ಎಂದು ಹೇಳಿದರು.
ಇದನ್ನೂ ಓದಿ: ರಾಹುಲ್ ಗಾಂಧಿಯೊಂದಿಗೆ ಭಿನ್ನಾಭಿಪ್ರಾಯವಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರಿಯಾಂಕಾ ಪ್ರತಿಕ್ರಿಯಿಸಿದ್ದು ಹೀಗೆ