ಕಂದಾಯ ಸಚಿವ ಆರ್. ಅಶೋಕ್ ಫೆ.19ಕ್ಕೆ ಆರೂರಿನಲ್ಲಿ ಗ್ರಾಮವಾಸ್ತವ್ಯ

Update: 2022-02-14 15:52 GMT

ಉಡುಪಿ, ಫೆ.14:ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಫೆ.19ರ ಶನಿವಾರ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಲಿರುವ ಸಚಿವ ಆರ್.ಅಶೋಕ್, ಬಳಿಕ ಕೊಕ್ಕರ್ಣೆ ಹಾಗೂ ಕಳ್ತೂರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಕಂದಾಯ ಸಚಿವರ ಗ್ರಾಮವಾಸ್ತವ್ಯಕ್ಕೆ ಪೂರ್ವಭಾವಿಯಾಗಿ ಶಾಸಕ ಕೆ. ರಘುಪತಿ ಭಟ್ ಇಂದು ಅಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಪೂರ್ವ ತಯಾರಿಯ ಬಗ್ಗೆ ಚರ್ಚಿಸಿದರು.

ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಪೊಲೀಸ್ ಉಪನಿರೀಕ್ಷಕ ಗುರುನಾಥ್ ಹಾದಿಮನೆ ಮುಂತಾದವರು ಉಪಸ್ಥಿತರಿದ್ದರು.

ಉಳಿದಂತೆ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಕೊಕ್ಕರ್ಣೆ, ಕಳ್ತೂರು, ಆರೂರು ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News