ಫೆ.16ರಿಂದ ಪಿಯು, ಪದವಿ ಕಾಲೇಜು ಆರಂಭ: ಸಚಿವ ಬಿ.ಸಿ ನಾಗೇಶ್
Update: 2022-02-14 22:13 IST
ಬೆಂಗಳೂರು: 'ಫೆ.16ರಿಂದ ಪಿಯುಸಿ (1&2) ಮತ್ತು ಪದವಿ ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಅಶ್ವತ್ಥನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಫೆ.16ರಿಂದ ಪಿಯು (1&2) ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಸಚಿವರಾದ @JnanendraAraga @drashwathcn ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
— B.C Nagesh (@BCNagesh_bjp) February 14, 2022
ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.