×
Ad

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತುಂಬೆಯಲ್ಲಿ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Update: 2022-02-14 23:49 IST

ಬಂಟ್ವಾಳ, ಫೆ‌.14: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ‌. ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ  ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು  ತಿಳಿದುಬಂದಿದೆ.

ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News