×
Ad

ವಿದ್ಯಾರ್ಥಿಗಳನ್ನು ಮುಂದಿಟ್ಟು ಸಮಾಜ ಒಡೆಯುವವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ: ಆರಗ ಜ್ಞಾನೇಂದ್ರ

Update: 2022-02-15 10:19 IST

ಬೆಂಗಳೂರು, ಫೆ.15: ರಾಜ್ಯದಲ್ಲಿ ಬುಧವಾರದಿಂದ ಎಲ್ಲಾ ಶಾಲಾ ಕಾಲೇಜುಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ, ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಸದಸ್ಯರೊಂದಿಗೆ ಈ ಬಗ್ಗೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು, ಯಾವುದೇ ಆತಂಕ ಅಥವಾ ಅಭದ್ರತೆಯ ಭಯವಿಲ್ಲದೆ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೆಲವು ಮತೀಯ ಸಂಘಟನೆಗಳು ಮುಗ್ಧ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಸಮಾಜ ಹಾಗೂ ಮನಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಗುರುತಿಸಿ ತಕ್ಕ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಗೃಹಸಚಿವರು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಕೇವಲ ಬೆರೆಣಿಕೆಯಷ್ಟು ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕವಾದ ಅಭಿಪ್ರಾಯ ಅಲ್ಲ ಎಂದು ನನ್ನ ಅನಿಸಿಕೆ. ನಾವೆಲ್ಲರೂ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು. ಅದರಂತೆ ನಡೆದುಕೊಳ್ಳಬೇಕು, ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News