ಕಾಂಗ್ರೆಸ್ ತೊರೆದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್
Update: 2022-02-15 12:20 IST
ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಕಾನೂನು ಸಚಿವ ಡಾ.ಅಶ್ವನಿ ಕುಮಾರ್ ಅವರು ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದೊಂದಿಗಿನ ತಮ್ಮ ದಶಕದ ಬಾಂಧವ್ಯವನ್ನು ಕೊನೆಗೊಳಿಸಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಪಂಜಾಬ್‌ನ ಮಾಜಿ ರಾಜ್ಯಸಭಾ ಸಂಸದ ಕುಮಾರ್ "ನಾನು 46 ವರ್ಷಗಳ ಸುದೀರ್ಘ ಒಡನಾಟದ ನಂತರ ಪಕ್ಷವನ್ನು ತೊರೆಯುತ್ತಿದ್ದೇನೆ'' ಎಂದು ತಿಳಿಸಿದ್ದಾರೆ.