ಬಿವಿಟಿಯಲ್ಲಿ ಉಚಿತ ಎಂಬ್ರಾಯ್ಡರಿ ತರಬೇತಿ

Update: 2022-02-15 13:23 GMT

ಮಣಿಪಾಲ: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಫೆ.23ರಿಂದ 10 ದಿನಗಳ ಕಾಲ ಉಚಿತ ಎಂಬ್ರಾಯ್ಡರಿ ತರಬೇತಿಯನ್ನು ಹಮ್ಮಿ ಕೊಳ್ಳಲಾಗಿದೆ. ಸ್ವಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು/ಯುವತಿಯರು ಈ ತರಬೇತಿಯ ಸದುಪಯೊೀಗವನ್ನು ಪಡೆದುಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಫೆ.21ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ ಉಡುಪಿ-576102 ಈ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿಕೊಡಬಹುದು. ಅಥವಾ ದೂರವಾಣಿ ಸಂಖ್ಯೆ:0820-2570263,ಮೊಬೈಲು- 8970891031 ನ್ನು ಸಂಪರ್ಕಿಸುವ ಮೂಲಕ ತಮ್ಮ ಭಾಗವಹಿಸುವಿಕೆಯನ್ನು ದೃಢೀಕರಿಸಬಹುದು ಎಂದು ಸಂಸ್ಥೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News