ಬುಧವಾರದಿಂದ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ಪುನಾರಂಭ

Update: 2022-02-15 13:47 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.15: ರಾಜ್ಯದಲ್ಲಿರುವ ಸರಕಾರಿ, ಖಾಸಗಿ ಹಾಗೂ ಅನುದಾನಿತ ಕಾಲೇಜುಗಳನ್ನು ಫೆ.16ರಿಂದ ಆರಂಭಿಸಲಾಗುವುದು ಎಂದು ಸರಕಾರವು ಪ್ರಕಟನೆ ಹೊರಡಿಸಿದೆ.

ಫೆ.11ರಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾರ್ಪಾಡಿಸಿ, ಫೆ.16ರ ರಜೆಯನ್ನು ರದ್ದುಪಡಿಸಲಾಗಿದೆ. ಹಾಗಾಗಿ ರಾಜ್ಯದ ವಿಶ್ವವಿದ್ಯಾಲಯಗಳು ಸೇರಿದಂತೆ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ಫೆ.16ರಿಂದ ಪುನಾರಂಭಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News