ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯನ್ನು ಬೆನ್ನಟ್ಟಿ ವಿಡಿಯೋ ಚಿತ್ರೀಕರಣ: ಪತ್ರಕರ್ತನ ವರ್ತನೆಗೆ ವ್ಯಾಪಕ ಆಕ್ರೋಶ

Update: 2022-02-15 17:35 GMT

ಶಾಲಾ ಆವರಣದೊಳಗೆ ಹಿಜಾಬ್ ಧರಿಸಿ ಹೋಗುತ್ತಿರುವ ವಿದ್ಯಾರ್ಥಿನಿಯನ್ನು ಮಾಧ್ಯಮ ಪ್ರತಿನಿಧಿಯೊಬ್ಬರು ಬೆನ್ನಟ್ಟುತ್ತಿರುವುದು ಮತ್ತು ವಿದ್ಯಾರ್ಥಿ ಆತನಿಗೆ ಹೆದರಿ ಓಡುತ್ತಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಿವಮೊಗ್ಗ ನಗರದ ಸೈನ್ಸ್ ಮೈದಾನದ ಬಳಿ ಇರುವ ಕರ್ನಾಟಕ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಕೂಡ ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಶಾಲಾ ಆವರಣದೊಳಗೆ ಬಂದಿದ್ದರು. ಈ ವೇಳೆ ಮಾಧ್ಯಮ ಪ್ರತಿನಿಧಿಯೊಬ್ಬರು ವೀಡಿಯೊ ಚಿತ್ರೀಕರಣ ಮಾಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಾಧ್ಯಮ ಪ್ರತಿನಿಧಿಯ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಕೂಡಲೇ ಆತನನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮಾಧ್ಯಮಗಳಿಗೆ ಶಿಕ್ಷಣ ಸಂಸ್ಥೆ ಪ್ರವೇಶಕ್ಕೆ ನಿರ್ಬಂಧ ಹೇರಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News