×
Ad

ಪುರಸಭೆಗಳಲ್ಲಿ ಖಾಲಿ ಹುದ್ದೆ ಭರ್ತಿ: ಸಚಿವ ಎಂಟಿಬಿ ನಾಗರಾಜ್

Update: 2022-02-15 23:11 IST

ಬೆಂಗಳೂರು, ಫೆ.15: ಪುರಸಭೆಗಳಲ್ಲಿ ಸುಮಾರು 9,300 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ತುಂಬಲು ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು (ಎಂಟಿಬಿ) ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್ತಿನ ಅಧಿವೇಶನದ ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.

ರಾಜ್ಯದ ಪುರಸಭೆಗಳಿಗೆ ಎಸ್‍ಎಫ್‍ಸಿ, ಅಮೃತ್ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ-4, ಸ್ವಚ್ಛ ಭಾರತ್ ಮಿಷನ್ ಮತ್ತು 15ನೇ ಹಣಕಾಸು ಆಯೋಗದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನವನ್ನು ಮಂಜೂರು ಮಾಡಲಾಗಿದೆ. ಜತೆಗೆ, ರಾಜ್ಯದ ಪುರಸಭೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News