ಇಂಡೋನೇಶ್ಯಾ: 13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

Update: 2022-02-15 18:17 GMT
ಸಾಂದರ್ಭಿಕ ಚಿತ್ರ
 

ಜಕಾರ್ತ, ಫೆ.15: ಅಪ್ರಾಪ್ತ ವಯಸ್ಸಿನ 13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಅಪರಾಧದಲ್ಲಿ ಶಿಕ್ಷಕನಿಗೆ ಇಂಡೊನೇಶ್ಯಾದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ಜಾರಿಗೊಳಿಸಿದೆ.
ಧಾರ್ಮಿಕ ವಸತಿ ಶಾಲೆಯಲ್ಲಿ ನಡೆದಿದ್ದ ಈ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಬಡವರ್ಗದ ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದ ಶಾಲೆಯಲ್ಲಿ ಶಿಕ್ಷಕನಾಗಿದ್ದ ಹೆರೀ ವೀರಾವನ್ ಎಂಬ ಶಿಕ್ಷಕ 13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದು ಇದರಲ್ಲಿ ಕನಿಷ್ಟ 8 ಬಾಲಕಿಯರು ಗರ್ಭವತಿಯಾಗಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು.
ಓರ್ವ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ದಾಖಲಿಸಿದಾಗ ಗರ್ಭವತಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಬಾಲಕಿ ನೀಡಿದ ಮಾಹಿತಿಯ ಮೇರೆಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ಸಂದರ್ಭ ಆರೋಪಿ ಶಿಕ್ಷಕ ಒಟ್ಟು 13 ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದು ಸಾಬೀತಾಗಿದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News